ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ ಅನ್ನಸಂತರ್ಪಣೆ

Offering of food on the occasion of Nalvadi Krishnaraja Wodeyar Jayanti
Published on

ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ ಬುಧವಾರ ನಾಲ್ವಡಿ ಅಭಿಮಾನಿಗಳಿಂದ ನಗರದ ಮಹಾರಾಜ ಕಾಲೇಜಿನಲ್ಲಿ 3,500 ಪೌರ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಣೆ ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ನಮ್ಮ ಮೈಸೂರು ಸ್ವಚ್ಛತೆಗೆ ಹೆಸರುವಾಸಿಯಾಗಿದೆ. ಅಂದಿನ ಕಾಲದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ವಚ್ಛತೆಗೆ ಆದ್ಯತೆ ನೀಡಿದ್ದರು. ನಗರವನ್ನು ಸ್ವಚ್ಛವಾಗಿಡಲು ಪೌರ ಕಾರ್ಮಿಕರ ಪರಿಶ್ರಮ ಅಪಾರ ಎಂದರು.

ಇದು ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ನಾಲ್ವಡಿ ಅಭಿಮಾನಿಗಳು ಆಯೋಜಿಸಿರುವ ಕಾರ್ಯಕ್ರಮವಾಗಿದೆ. ಇದು ಪಕ್ಷಾತೀತ ಮತ್ತು ಜಾತ್ಯತೀತವಾಗಿರುವ ಹಾಗೂ ಅಪ್ಪಟ ಜನೋಪಯೋಗಿ ಕಾರ್ಯಕ್ರಮವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಮೈಸೂರಿನಲ್ಲಿ ಇವರು ಪ್ರಾತಃ ಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net