ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ

30spt1
ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಶ್ರೀ ಹೊನ್ನಮ್ಮನ ಕೆರೆ ಕ್ಷೇತ್ರದಲ್ಲಿ ಸ್ವರ್ಣಗೌರಿ ಹಬ್ಬದ ನಿಮಿತ್ತ ಭಕ್ತರು ಮಂಗಳವಾರ ಬಾಗಿನ ಅರ್ಪಿಸಿದರು.
Published on

ಸೋಮವಾರಪೇಟೆ: ದೊಡ್ಡಮಳ್ತೆ ಗ್ರಾಮದ ಹೊನ್ನಮ್ಮನಕೆರೆ ಕ್ಷೇತ್ರದಲ್ಲಿ ಮಂಗಳವಾರ ಸ್ವರ್ಣಗೌರಿ ಉತ್ಸವ ಅಂಗವಾಗಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಗ್ರಾಮದ ಹಿರಿಯರು ಹಾಗೂ ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.


ಬೆಳಗ್ಗೆ 10.30ರಲ್ಲಿ ಸಂಪ್ರದಾಯದಂತೆ ಶ್ರೀ ಸಿದ್ದೇಶ್ವರ, ಬಸವೇಶ್ವರ, ಸ್ವರ್ಣಗೌರಿ ಹೊನ್ನಮ್ಮ ದೇವಾಲಯ ಸಮಿತಿ ಮತ್ತು ಹೊನ್ನಮ್ಮದೇವಿ ಕುಟುಂಬಸ್ಥರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಾಗಿನವನ್ನು ಬಂಗಾರದ ಕಲ್ಲಿನ ಮೇಲಿಟ್ಟು ಪೂಜಿಸಿ, ನಂತರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಿಸಿದರು. ಗ್ರಾಮದ ಸಮೃದ್ಧಿಗಾಗಿ ಇದೇ ಸಂದರ್ಭ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ವಿಶೇಷವೆಂದರೆ ನವ ದಂಪತಿಗಳು ಕೆರೆಗೆ ಪೂಜಿಸಿ ಹರಕೆ ಬಾಗಿನ ಸಮರ್ಪಿಸಿದರು.

ಇದೇ ಸಂದರ್ಭ ಮಾಜಿ ಸಚಿವ ಬಿ.ಎ.ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮತ್ತಿತರ ಗಣ್ಯರು ಬಾಗಿನ ಅರ್ಪಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಡಿ.ಬಿ.ವೀರೇಶ್, ಉಪಾಧ್ಯಕ್ಷ ಡಿ.ಎಂ. ಪ್ರಸನ್ನ, ಕಾರ್ಯದರ್ಶಿ ಎಂ.ಜಿ.ಕಿರಣ್ ಕುಮಾರ್ ಇತರರು ಇದ್ದರು. ದೇವಾಲಯದ ವತಿಯಿಂದ ಭಕ್ತರಿಗೆ ಅನ್ನದಾನದ ವ್ಯವಸ್ಥೆ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net