

ಮಡಿಕೇರಿ:
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಮಡಿಕೇರಿ ಕಚೇರಿಯನ್ನು ಶುಕ್ರವಾರ ಆರಂಭಿಸಲಾಯಿತು. ಕೊಡಗು ಜಿಲ್ಲಾ ಪಂಚಾಯತ್ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಕಚೇರಿಯನ್ನು ಶಾಸಕರಾದ ಮಂತರ್ ಗೌಡ ಉದ್ಘಾಟಿಸಿದರು. ಇದಕ್ಕೂ ಮೊದಲು ಕಚೇರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಮಂತರ್ ಗೌಡ, ತಮ್ಮ ಕ್ಷೇತ್ರದ ಜನರು ತಮ್ಮ ಯಾವುದೇ ಕೆಲಸ ಕಾರ್ಯ, ಸಮಸ್ಯೆಗಳು ಇದ್ದರೂ ಇಲ್ಲಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಇದೇ ಸಂದರ್ಭ ಶುಭ ಹಾರೈಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಈ ಕಚೇರಿ ಮಡಿಕೇರಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹಾರ ಮಾಡುವ ಕೇಂದ್ರವಾಗಲಿ ಎಂದು ಆಶಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ನಂದಕುಮಾರ್,ಯಾಕೂಬ್, ಪಕ್ಷದ ಮುಖಂಡರುಗಳಾದ ಎಸ್. ಎಂ. ಚಂಗಪ್ಪ, ಪುಲಿಯಂಡ ಜಗದೀಶ್, ಸುಜು ತಿಮ್ಮಯ್ಯ ಮತ್ತಿತರು ಇದ್ದರು.