

ಮೂಲ್ಕಿ: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ತಿಳಿವಳಿಕೆ ಸಹಿತ ಸಮಾಜಮುಖಿಯಾಗಿ ಬೆಳೆಯುವಲ್ಲಿ ಇಂಟರ‌್ಯಾಕ್ಟ್ ಬಹುಸಹಕಾರಿ ಎಂದು ಮೂಲ್ಕಿ ರೋಟರಿ ಅಧ್ಯಕ್ಷ ಜೇಮ್ಸ್ ಪೀಟರ್ ಡಿಸೋಜ ಹೇಳಿದರು.
ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗಗಳ ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂಟರಾಕ್ಟ್ ನಿರ್ದೇಶಕ ಜಿನರಾಜ ಸಾಲ್ಯಾನ್ ಪದಗ್ರಹಣ ನಡೆಸಿಕೊಟ್ಟರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ, ಪ್ರೌಢಶಾಲೆಯ ಹಿರಿಯ ಸಹಶಿಕ್ಷಕಿ ಜಯಲಕ್ಷ್ಮೀ ನಾಯಕ್, ಸಂಯೋಜಕಿ ದೀಪ್ತಿ, ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ಇಂಟರಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಗಗನ್ ಹಾಗೂ ಕಾರ್ಯದರ್ಶಿಯಾಗಿ ಶ್ವೇತಾ, ಪ್ರೌಢಶಾಲೆ ಇಂಟರಾಕ್ಟ್ ಅಧ್ಯಕ್ಷರಾಗಿ ತನುಷ ಹಾಗೂ ಕಾರ್ಯದರ್ಶಿಯಾಗಿ ವಿಲಾಸ್ ಅವರಿಗೆ ಪದಗ್ರಹಣ ನಡೆಸಲಾಯಿತು. ವಿದ್ಯಾರ್ಥಿನಿ ಶಿಯಾ ನಿರೂಪಿಸಿದರು.