

ಹುಬ್ಬಳ್ಳಿ:ಜೆ.ಸಿ. ನಗರದಲ್ಲಿರುವ ಹು-ಧಾ ಮಹಾನಗರ ಪಾಲಿಕೆಯ ವಲಯ ಕಚೇರಿ (ನಂ.8) ಕಟ್ಟಡದಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಅವರ ಜನಸಂಪರ್ಕ ಕಚೇರಿಯ ಉದ್ಘಾಟನೆ ಸೋಮವಾರ ನಡೆಯಿತು.
ಮೂರುಸಾವಿರ ಮಠದ ಶ್ರೀ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಎರಡೆತ್ತಿನ ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿ, ರುದ್ರಾಕ್ಷಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ವಿಆರ್ಎಲ್ ಸಮೂಹ ಸಂಸ್ಥೆಗಳ ಎಂಡಿ ಡಾ. ಆನಂದ ಸಂಕೇಶ್ವರ ಹಾಗೂ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆ ನೆರವೇರಿತು.
ಬಳಿಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಭೇಟಿ ನೀಡಿದರು. ಶಾಸಕ ಎಂ.ಆರ್. ಪಾಟೀಲ, ಮೇಯರ್ ವೀಣಾ ಬರದ್ವಾಡ, ಸ್ವರ್ಣಾ ಗ್ರುಪ್ ಆಫ್ ಕಂಪನೀಸ್ನ ಎಂಡಿ ಡಾ. ವಿ.ಎಸ್.ವಿ. ಪ್ರಸಾದ, ಉಪ ಮೇಯರ್ ಸತೀಶ ಹಾನಗಲ್, ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲ, ಸಭಾನಾಯಕ ಶಿವು ಹಿರೇಮಠ, ಸದಸ್ಯರು ಆಗಮಿಸಿದ್ದರು.