ಕಚೇರಿ ಸ್ಥಳಾಂತರಿಸಿ ಇಲ್ಲವೇ ಪ್ರತ್ಯೇಕ ರಾಜ್ಯ ನೀಡಿ

22 Jaggu 2-Web
ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಪದಾಧಿಕಾರಿಗಳು ಸುವರ್ಣ ವಿಧಾನಸೌಧದ ಬಳಿ ಪ್ರತಿಭಟಿಸಿದರು. ಅಶೋಕ ಪೂಜಾರಿ, ವಕೀಲ ಬಿ.ಡಿ. ಹಿರೇಮಠ, ಗುರುರಾಜ ಹುಣಸೀಮರದ, ಶಂಕರ ಮಾಡಲಗಿ ಇತರರು ಪಾಲ್ಗೊಂಡಿದ್ದರು.
Published on

ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಕೇಳಿಬರತೊಡಗಿದೆ. ‘ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಿ. ಇಲ್ಲವೇ ನಮಗೆ ಪ್ರತ್ಯೇಕ ರಾಜ್ಯ ನೀಡಿ’ ಎಂದು ಒತ್ತಾಯಿಸಿ ಇಲ್ಲಿನ ಸುವರ್ಣಸೌಧದ ಬಳಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಶಾಸಕರು ಅಧಿವೇಶನದಲ್ಲಿ ಚರ್ಚಿಸಬೇಕು. ಪಕ್ಷಾತೀತವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಈ ಭಾಗದ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ಕಚೇರಿ ಸ್ಥಳಾಂತರ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಘೋಷಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಜೆಡಿಎಸ್ ಮುಖಂಡ ಅಶೋಕ ಪೂಜಾರಿ, ಸಾಮಾಜಿಕ ಹೋರಾಟಗಾರ ಹಾಗೂ ವಕೀಲ ಬಿ.ಡಿ. ಹಿರೇಮಠ, ಗುರುರಾಜ ಹುಣಸೀಮರದ, ಶಂಕರ ಮಾಡಲಗಿ, ಎಂ.ಟಿ. ಪಾಟೀಲ, ಸುಭಾನಿ ಹವಾಲ್ದಾರ್, ಸುರೇಶ ಮರಿಲಿಂಗನವರ ಹಾಗೂ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net