ಮುಖ್ಯಾಧಿಕಾರಿ, ಪೌರಕಾರ್ಮಿಕರ ಮೇಲಿನ ಹಲ್ಲೆಗೆ ಖಂಡನೆ ; ಕೂಡ್ಲಿಗಿ ತಾಲೂಕು ಸರ್ಕಾರಿ ನೌಕರರ ಸಂಘ ಒತ್ತಾಯ

160420 Kudligi Govt Employe Union Appeal
Published on

ಕೂಡ್ಲಿಗಿ: ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘ ತಾಲೂಕು ಘಟಕ ಗುರುವಾರ ತಹಸೀಲ್ದಾರ್ ಎಸ್.ಮಹಾಬಲೇಶ್ವರ ಮೂಲಕ ಡಿಸಿಗೆ ಮನವಿ ಸಲ್ಲಿಸಿತು.

ಸಂಘದ ಅಧ್ಯಕ್ಷ ಪಿ.ಶಿವರಾಜ್ ಮಾತನಾಡಿ, ಇತ್ತೀಚೆಗೆ ಸರ್ಕಾರಿ ನೌಕರರ ಮೇಲೆ ಹಲ್ಲೆಗಳು ಹೆಚ್ಚುತ್ತಿರುವುದು ತುಂಬಾ ನೋವಿನ ಸಂಗತಿ. ಇದರಿಂದ ಸರ್ಕಾರಿ ನೌಕರರು ಮಾನಸಿಕವಾಗಿ ಕುಗ್ಗಿ ಕರ್ತವ್ಯ ನಿರ್ವಹಿಸಲು ಭಯ ಪಡುವಂತಾಗಿದೆ. ಬುಧವಾರ ಪಟ್ಟಣದಲ್ಲಿ ಪಪಂ ಮುಖ್ಯಾಧಿಕಾರಿ ಹಾಗೂ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಖಂಡನೀಯ. ಇಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಸಂಘದ ರಾಜ್ಯ ಪರಿಷತ್ ಸದಸ್ಯ ಸಿ.ಅಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಕೆ.ನಾಗರಾಜ್, ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ವೀರೇಶ್, ಎಸ್.ವಿ.ಸಿದ್ಧಾರಾಧ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net