

ಮಸ್ಕಿ: ರಾಯಚೂರಿನಿಂದ ಸಿಂಧನೂರುವರೆಗಿನ ರಸ್ತೆಯಲ್ಲಿ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿದ್ದು, ಲೋಕೋಪಯೋಗಿ ಇಲಾಖೆ ಮತ್ತು ಕೆಆರ್‌ಐಡಿಎಲ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷೃದಿಂದಾಗಿ ನಿತ್ಯ ಅಪಘಾತಗಳಾಗುತ್ತಿವೆ. ಕೂಡಲೇ ಎರಡು ಇಲಾಖೆ ಅಧಿಕಾರಿಗಳನ್ನು ತಪ್ಪಿತಸ್ಥರನ್ನಾಗಿ ಮಾಡಿ ಶಿಕ್ಷೆ ವಿಧಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ತು ಪದಾಧಿಕಾರಿಗಳು ಒತ್ತಾಯಿಸಿದರು.
ಈ ಕುರಿತು ಪಟ್ಟಣದಲ್ಲಿ ತಹಸಿಲ್ ಕಚೇರಿ ಮುಂಬಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಅವರಿಗೆ ಮನವಿ ಸಲ್ಲಿಸಿದರು. ಮಾನ್ವಿ ತಾಲೂಕಿನ ಕಪಗಲ್ ಬಳಿ ಅಪಘಾತ ನಡೆಯಲು ರಸ್ತೆ ದುರಸ್ತಿ ಮಾಡದಿರುವುದು ಪ್ರಮುಖ ಕಾರಣವಾಗಿದೆ. ಅಪಘಾತದಲ್ಲಿ ಮೃತಪಟ್ಟ ಹಾಗೂ ವಿಕಲಾಂಗರಾಗಿರುವ ವಿದ್ಯಾರ್ಥಿಗಳ ಪಾಲಕರಿಗೆ ಸರ್ಕಾರ ಹೆಚ್ಚಿನ ನೆರವು ನೀಡುವಂತೆ ಒತ್ತಾಯಿಸಿದರು.