

ಯಳಂದೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಪಿ.ಮಹೇಶ ಕುಮಾರ್ ಶನಿವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲಿಸಿದರು. ಕ್ಯಾಂಟೀನ್ ಗುತ್ತಿಗೆದಾರನಿಗೆ ನೋಟಿಸ್ ನೀಡಿ ಸೂಕ್ತ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ನ.6 ರಂದು ವಿಜಯವಾಣಿ ದಿನಪತ್ರಿಯಲ್ಲಿ ‘ಇಂದಿರಾ ಕ್ಯಾಂಟೀನ್ ಮತ್ತೆ ಸ್ಥಗಿತ’. ಶೀರ್ಷಿಕೆ ಅಡಿ ವರದಿ ಪ್ರಕಟವಾಟದ ಹಿನ್ನೆಲೆಯಲ್ಲಿ ಎಂ.ಪಿ.ಮಹೇಶ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಗುತ್ತಿಗೆದಾರ ಅಡುಗೆ ಸಿಬ್ಬಂದಿಗೆ ವೇತನ ನೀಡಿದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದು. ಈ ಬಗ್ಗೆ ಗುತ್ತಿಗೆದಾರನಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮವಹಿಸಲಾಗುವುದು. ಮುಂದೆ ಈ ರೀತಿಯ ನಡೆಯಬಾರದು ಎಂದು ಸೂಚಿಸಿದರು. ಪಂಚಾಯಿತಿ ಸಿಬ್ಬಂದಿ ಮಲ್ಲಿಕಾರ್ಜುನ, ರಘು, ಜಗದೀಶ್ ಸೇರಿದಂತೆ ಇತರರು ಇದ್ದರು.