ಹೋಮ್ ಕ್ವಾರಂಟೈನ್ ಕಡ್ಡಾಯ

MEETINIG
Published on

ಯಾದಗಿರಿ: ಸರ್ಕಾರದ ಹೊಸ ಮಾರ್ಗಸೂಚಿಯಂತೆ ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ನಿಗದಿತ ಅವಧಿವರೆಗೆ ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ನಂತರ ಹೋಮ್ ಕ್ವಾರಂಟೈನ್ ಕಡ್ಡಾಯವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್ ಸೂಚಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಕೋವಿಡ್-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆ ನಡೆಸಿದ ಅವರು, ಸಾಂಸ್ಥಿಕ ಕ್ವಾರಂಟೈನ್ ಅವಧಿಯಲ್ಲಿ ಶಿಷ್ಟಾಚಾರದಂತೆ ಗಂಟಲು ದ್ರವ ಮಾದರಿ ಸಂಗ್ರಹಿಸಬೇಕು. ನಂತರ ಅವರ ಆರೋಗ್ಯ ಸ್ಥಿತಿ ಮತ್ತು ಯಾವ ರಾಜ್ಯದಿಂದ ಹಿಂದಿರುಗಿದವರು ಎಂಬ ಆಧಾರದ ಮೇಲೆ ಹೋಮ್ ಕ್ವಾರಂಟೈನ್ಗೆ ಸೂಚಿಸಬಹುದು. ಮನೆಗೆ ಕಳುಹಿಸುವ ಮುನ್ನ ಕ್ವಾರಂಟೈನ್ಗೆ ಒಳಪಟ್ಟವರ ಕೈ ಮೇಲೆ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಬೇಕು. ಈ ವೇಳೆ ಅವರ ವಿಳಾಸ, ಮೊಬೈಲ್ ಸಂಖ್ಯೆ ಇತರ ವಿವರ ಮತ್ತೊಮ್ಮೆ ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಗಭರ್ಿಣಿಯರು ಇದ್ದುದ್ದರಿಂದ ಹೋಮ್ ಕ್ವಾರಂಟೈನ್ ಬೇಡ ಎನ್ನುವವರಿಗಾಗಿ 14 ದಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿರಲು ವ್ಯವಸ್ಥೆ ಮಾಡಬೇಕು ಎಂದು ನಿದರ್ೇಶನ ನೀಡಿದರು. ಹೋಮ್ ಕ್ವಾರಂಟೈನ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುವಂತಿಲ್ಲ. ಅದೇ ರೀತಿ ವ್ಯಕ್ತಿಗಳು ಕೂಡ ಮನೆ ಬಿಟ್ಟು ಹೊರಗಡೆ ಬರತಕ್ಕದ್ದಲ್ಲ. ಒಂದು ವೇಳೆ ಹೊರಬಂದರೆ ಪ್ರಕರಣ ದಾಖಲಿಸಿ. ಇವರ ಮೇಲೆ ತೀವ್ರ ನಿಗಾ ವಹಿಸಲು ಗ್ರಾಮ ಮಟ್ಟದಲ್ಲಿರುವ ಟಾಸ್ಕ್ ಫೋರ್ಸ್​ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಇನ್ನು ವಲಸೆ ಕಾಮರ್ಿಕರಿಗೆ ಪಡಿತರ ಚೀಟಿ ಇರಲಿ ಅಥವಾ ಇಲ್ಲದಿರಲಿ, ಆಹಾರ ಧಾನ್ಯ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಮಾತನಾಡಿ, ಹೊರ ರಾಜ್ಯಗಳಿಂದ ಆಗಮಿಸಿದ 13,141 ಜನರನ್ನು ಜಿಲ್ಲೆಯ 211 ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್ಗಳಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಈ ಪೈಕಿ 11 ಸಾವಿರ ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಶುಕ್ರವಾರದವರೆಗೆ 14,695 ಮಾದರಿ ಕಳುಹಿಸಿದ್ದು, 8,150 ವರದಿ ಬರಬೇಕಿದೆ. ವಲಸಿಗರ ಅವಲೋಕನ ಅವಧಿ ಮುಗಿದ ಬಳಿಕ ಬಿಡುಗಡೆಗೊಳಿಸುವಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಶುಕ್ರವಾರ 1502 ಜನರನ್ನು ಕ್ವಾರಂಟೈನ್ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಟೆಸ್ಟ್ಗೆ ಪೂರ್ವಭಾವಿಯಾಗಿ 2 ಟ್ರೂನ್ಯಾಟ್ ಲ್ಯಾಬ್ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರ್ಟಿ-ಪಿಸಿಆರ್ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಂತ್ರೋಪಕರಣ ಬಂದ ನಂತರ ಜಿಲ್ಲೆಯಲ್ಲೇ ಪರೀಕ್ಷೆ ನಡೆಸಬಹುದು. ಹೊಸ ಜಿಲ್ಲಾಸ್ಪತ್ರೆಯಲ್ಲಿ 132 ಹಾಸಿಗೆಗಳಿಗೆ ಹೈಫ್ರೋ ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮಾಡಲಾಗಿದೆ. 33 ತಜ್ಞ ವೈದ್ಯರು, 63 ವೈದ್ಯರು, 18 ಶುಶ್ರೂಷಕರು, 16 ಲ್ಯಾಬ್ ತಂತ್ರಜ್ಞರು ಹಾಗೂ 20 ಫಾರ್ಮಾಸಿಸ್ಟ್ಗಳ ಅಗತ್ಯವಿದೆ. ಅರ್ಜಿ ಕರೆದರೂ ತಜ್ಞ ವೈದ್ಯರು, ವೈದ್ಯರು, ಲ್ಯಾಬ್ ತಂತ್ರಜ್ಞರು ಬರುತ್ತಿಲ್ಲ ಎಂದು ಹೇಳಿದರು.

ಸುರಪುರದ ಆಸರ್ ಮೊಹಲ್ಲಾ, ಶಹಾಪುರ ತಾಲೂಕಿನ ಕನ್ಯಾಕೋಳೂರು, ಚಂದಾಪುರ ಕೆಳಗಿನ ತಾಂಡಾ ಮತ್ತು ಯಾದಗಿರಿ ದುಖಾನವಾಡಿ ಸೇರಿ 4 ಕಂಟೇನ್ಮೆಂಟ್ ಜೋನ್ಗಳಿದ್ದು, ಸಿಝಡ್ ಆ್ಯಪ್ ಮೂಲಕ ಶೇ.78.47 ಸವರ್ೇ ಮಾಡಲಾಗಿದೆ. ಜಿಲ್ಲಾದ್ಯಂತ ಮತಗಟ್ಟೆ ಅಧಿಕಾರಿಗಳು, ಶಿಕ್ಷಕರು ಮತ್ತು ಆಶಾ ಕಾರ್ಯಕತರ್ೆಯರಿಂದ ಹೆಲ್ತ್ವಾಚ್ ಆ್ಯಪ್ ಮೂಲಕ ನಡೆಸುತ್ತಿರುವ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಶೇ.79.44 ಪೂರ್ಣಗೊಂಡಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net