ಕುಂದಾಪುರ ತಾಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ

meeting
ಮುಂಗಾರು ಮಳೆಯನ್ನು ಸಮರ್ಥವಾಗಿ ನಿಭಾಯಿಸುವ ಕುರಿತು ಕುಂದಾಪುರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು
Published on

ಗಂಗೊಳ್ಳಿ: ಮುಂಗಾರು ಮಳೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಉಂಟಾಗಬಹುದಾದ ಪ್ರವಾಹ ನೆರೆ ಹಾವಳಿ ಮೊದಲಾದ ಸಮಸ್ಯೆ ಎದುರಿಸಲು ಸಜ್ಜಾಗಿರುವಂತೆ ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮದ ಕುರಿತು ಕುಂದಾಪುರ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಶುಕ್ರವಾರ ನಡೆಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ತಹಸೀಲ್ದಾರ್ ಎಸ್.ಎ. ಪ್ರಸಾದ್, ಕುಂದಾಪುರ ತಹಸೀಲ್ದಾರ್ ಎಸ್.ಶೋಭಾಲಕ್ಷ್ಮೀ, ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಹೆಗಡೆ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಬ್ರಹ್ಮಾವರ ತಾಪಂ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್ ಉಪಸ್ಥಿತರಿದ್ದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ತಾಲೂಕು ಮಟ್ಟದ ಅಧಿಕಾರಿಗಳು, ಪಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮುಂಗಾರು ಮಳೆಯನ್ನು ಸಮರ್ಥವಾಗಿ ನಿಭಾಯಿಸುವ ಕುರಿತು ಚರ್ಚೆ ನಡೆಸಿ ಅಗತ್ಯ ಸೂಚನೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net