ಅಧಿಕಾರಿಗಳು ಅಭಿವೃದ್ಧಿಗೆ ಸಹಕರಿಸಲಿ: ಸರ್ಕಾರಿ ನೌಕರರ ಸಮಾವೇಶ ಉದ್ಘಾಟನೆ

Govt employees function in savanur
Published on

ಸವಣೂರ: ಕ್ಷೇತ್ರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಮಾತನ್ನು ಸುಳ್ಳಾಗಿಸಲು ನೌಕರರು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಪಟ್ಟಣದ ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ನೌಕರರ ಕಾರ್ಯಾಗಾರ, ಮಹಿಳಾ ದಿನ ಹಾಗೂ ನೌಕರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ರಾಜ್ಯದಲ್ಲಿ ಬಹಳಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಹೀಗಾಗಿ, ನೌಕರರು ನಿತ್ಯ ಒತ್ತಡದಲ್ಲಿ ಬದುಕುವಂತಾಗಿದೆ. ಜನಸಂಖ್ಯೆ ಆಧಾರದ ಮೇಲೆ ಸರ್ಕಾರಿ ಇಲಾಖೆಗಳಿಗೆ ನೌಕರರನ್ನು ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ. ಹಲವು ಶಾಲೆಗಳಲ್ಲಿ ಡಿ ಗ್ರುಪ್ ನೌಕರರು ಇಲ್ಲದ ಕಾರಣ ಶಿಕ್ಷಕರು ಅವರ ಕೆಲಸ ಮಾಡುವ ಸ್ಥಿತಿ ಎದುರಾಗಿದೆ. ಎನ್​ಪಿಎಸ್, ಪದವೀಧರ ಶಿಕ್ಷಕರ ಹೋರಾಟಕ್ಕೆ ಸಂಘಟನೆ ಸದಾ ನಿಮ್ಮೊಂದಿಗೆ ಇರಲಿದೆ ಎಂದರು.

ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವ ಸ್ವಾಮೀಜಿ ಮತ್ತು ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮೀಜಿ ಆಶೀರ್ವಚನ ನೀಡಿದರು.

ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಹೊಸಮನಿ, ವಿಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು.

ಮಹಿಳಾ ದಿನಾಚರಣೆ ಅಂಗವಾಗಿ ಎಸಿ ಮಮತಾ ಹೊಸಗೌಡ್ರ ತಾಲೂಕಿನ ಮಹಿಳಾ ಸಾಧಕಿಯರ ಕಿರು ಹೊತ್ತಗೆ ಬಿಡುಗಡೆ ಮಾಡಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸುಭಾಸ ಮಜ್ಜಗಿ, ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ, ತಹಸೀಲ್ದಾರ್ ಭರತರಾಜ್ ಕೆ.ಎನ್., ಬಿಇಒ ಎಂ.ಎಫ್. ರ್ಬಾ, ಉಮಾ ಕೆ.ಎಸ್., ಸಂದೇಶ ಲಾಡ್, ಪ್ರಶಾಂತ ಮಾಡಳ್ಳಿ, ರಾಮಕೃಷ್ಣ ಘಾಟಗೆ, ಪಟೇಲ್ ಮಹ್ಮದ ಅಸಗರ, ಇತರರು ಇದ್ದರು. ಸಿ.ಎ. ಬಮ್ಮಕ್ಕನವರ, ವಿದ್ಯಾಧರ ಕುತನಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net