ಚಕ್‌ಪೋಸ್ಟ್‌ಗಳಿಗೆ ಅಧಿಕಾರಿಗಳ ಅನಿರೀಕ್ಷಿತ ಭೇಟಿ

Officials surprise visit to checkposts
ಬಾಗಲಕೋಟೆ ತಾಲೂಕಿನ ಹೊಸೂರ ಚಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಎಸ್ಪಿ ಅಮರನಾಥ ರೆಡ್ಡಿ, ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ಮಾಡಿದರು.
Published on


ಬಾಗಲಕೋಟೆ: ಲೋಕಸಭೆ ಚುನಾವಣೆ ನೀತಿ ಸಂಹಿತ ಜಾರಿಯಾದ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಚಕ್ ಪೋಸ್ಟಗಳಿಗೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಕ್ ಪೋಸ್ಟಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಸಿಇಒ ಶಶಿಧರ ಕುರೇರ ಅನೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಚಕ್ ಪೋಸ್ಟ್ ಸಿಬ್ಬಂದಿಗಳ ಕಾರ್ಯನಿರ್ವಹಣೆ ಪರಿಶೀಲನೆ ಮಾಡಿದರು. ಹೊನ್ನಾಕಟ್ಟಿ, ಹೊಸೂರ, ನಾಯನೇಗಲಿ, ಧನ್ನೂರ ಚೆಕ್ ಪೋಸ್ಟಗಳಲ್ಲಿ ಖಾಸಗಿ ವಾಹನ, ಸರ್ಕಾರಿ ಬಸ್, ಬ್ಯಾಗ್‌ಗಳನ್ನು ಪರಿಶೀಲನೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net