ನೀರು ಘಟಕ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ

kudige
Published on

ಕುಶಾಲನಗರ: ಜಲಜೀವನ್ ಕುಡಿಯುವ ನೀರು ಘಟಕದ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಲಜೀವನ್ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಾಪಟ್ಟಣ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರು ಸರಬರಾಜು ಘಟಕದ ಕೇಂದ್ರಕ್ಕೆ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಅಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಮೀಪದ ಕಾವೇರಿ ನದಿಯಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವ ಜಕ್ಸ್ವೆಲ್ ಕೇಂದ್ರದ ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಲಜೀವನ್ ಕುಡಿಯುವ ನೀರು ಸರಬರಾಜು ವಿಭಾಗದ ಅಧಿಕಾರಿಗಳಿಂದ ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಹಾಜರಿದ್ದ ಅಧಿಕಾರಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ಸಲಹೆ, ಸೂಚನೆ ನೀಡಿದರು. ಅಲ್ಲದೆ ಗ್ರಾಮದಲ್ಲಿ ಮನೆ, ಮನೆಗೆ ನೀರು ಸರಬರಾಜು ಮಾಡಲು ಅಳವಡಿಕೆ ಮಾಡಿರುವ ಪೈಪ್‌ಗಳ ಪರಿಶೀಲನೆ ಸರಬರಾಜು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ, ಕಾರ್ಯಪಾಲಕ ಅಭಿಯಂತರ ಭಾಸ್ಕರ್, ಸಹಾಯಕ ಕಾರ್ಯಪಾಲಕ ಅಭಿಯಂತರ ವೀರೇಂದ್ರ ಕುಮಾರ್, ಕುಶಾಲನಗರದ ತಾಲ್ಲೂಕು ತಹಶೀಲ್ದಾರ ಕಿರಣ್ ಗೌರಯ್ಯ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸೇರಿದಂತೆ ಕಂದಾಯ ಇಲಾಖೆಯ ಉಪ ತಹಶಿಲ್ದಾರ ಸಂತೋಷ್ ಸೇರಿದಂತೆ ಅಧಿಕಾರಿ ವರ್ಗದವರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net