ದತ್ತಪೀಠಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

15 ckm 5
ಚಿಕ್ಕಮಗಳೂರಿನ ದತ್ತಪೀಠ ಭಾಗದಲ್ಲಿ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಡಿಸಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
Published on

ಚಿಕ್ಕಮಗಳೂರು: ಶ್ರೀರಾಮಸೇನೆಯಿಂದ ನ. ೪ ರಿಂದ ೧೦ರವರೆಗೆ ನಡೆಯಲಿರುವ ದತ್ತಮಾಲಾ ಅಭಿಯಾನ ಮತ್ತು ದತ್ತ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದತ್ತಪೀಠಕ್ಕೆ ತೆರಳಿ ಅಭಿಯಾನದ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಅಧಿಕಾರಿಗಳ ತಂಡ ಕೈಮರ ಚೆಕ್‌ಪೋಸ್ಟ್ನಿಂದ ಐಡಿ ಪೀಠವರೆಗಿನ ರಸ್ತೆಯಲ್ಲಿ ಪರಿಶೀಲನೆ ನಡೆಸಿ ದತ್ತಜಯಂತಿ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಪಾರ್ಕಿಂಗ್ ವ್ಯವಸ್ಥೆ ಕುರಿತು ಚರ್ಚಿಸಿದರು. ಜೊತೆಗೆ ಈ ಪ್ರದೇಶಗಳಲ್ಲಿರುವ ಚೆಕ್‌ಪೊಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದತ್ತಜಯಂತಿ ಸಂದರ್ಭದಲ್ಲಿ ಸಾವಿರಾರು ಭಕ್ತರು ದತ್ತಪೀಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಕೆಲವೊಮ್ಮೆ ವಾಹನಗಳ ಸಂಚಾರ ದಟ್ಟಣೆ ಎದುರಾಗುವ ಜೊತೆಗೆ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಕೆಲವೊಮ್ಮೆ ಜಿಲ್ಲಾಡಳಿತ ಪೆಚಿಗೆ ಸಿಲುಕುವ ಸಾಧ್ಯತೆಯಿರುತ್ತದೆ. ಹೀಗಾಗಿ ಈ ರೀತಿಯ ಯಾವುದೇ ಸಣ್ಣಪುಟ್ಟ ಸಮಸ್ಯೆಯೂ ಆಗದಂತೆ ತಡೆಯುವ ಉz್ದೆÃಶದಿಂದ ಅಧಿಕಾರಿಗಳ ತಂಡ ದತ್ತಪೀಠ ಭಾಗದಲ್ಲಿ ಸಮಗ್ರವಾಗಿ ಪರಿಶೀಲನೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net