ಮಾ.2ರಂದು ನಗರದಲ್ಲಿ ಗುರುವಂದನಾ ಕಾರ್ಯಕ್ರಮ: ಜಿಲ್ಲಾ ಒಕ್ಕಲಿಗರ ಸಂಘದಿಂದ ಆಯೋಜನೆ

Okkaliga Association Press Conference mandya
Published on

ಮಂಡ್ಯ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.2ರಂದು ಬೆಳಗ್ಗೆ 11ಗಂಟೆಗೆ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ ಗೌಡಯ್ಯನದೊಡ್ಡಿ ತಿಳಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹಾಗೂ ಕೊಮ್ಮೇರಹಳ್ಳಿ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದಿನ ಕಾರ್ಯಕ್ರಮದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಒಕ್ಕಲಿಗರ ಸಂಘದ ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ. ಅಂತೆಯೇ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಬಿ.ಆರ್.ರವಿಕಾಂತೇಗೌಡ, ಪ್ರೇಮ್, ಡಾ.ರೇವಣ್ಣ, ಜಯಂತ್, ಟಿ.ಸತೀಶ್ ಜವರೇಗೌಡ ಅವರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು.

ಸಂಘದ ಪದಾಧಿಕಾರಿಗಳಾದ ನಾಗೇಶ್, ನವೀನ್, ತಮ್ಮೇಗೌಡ, ಕೇಶವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net