

ಕಡಬ: ಒಕ್ಕಲಿಗ ಸೇವಾ ಸಂಘದ ವತಿಯಿಂದ ಹೊಸಮಠದ ನಿವೇಶನದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಮನವಿ ಮಾಡಲಾಯಿತು.
ಒಕ್ಕಲಿಗ ಸೇವಾ ಸಂಘ ಅಧ್ಯಕ್ಷ ಸುರೇಶ್ ಬೈಲು ನೇತೃತ್ವದ ನಿಯೋಗ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿಧಾನಸಭಾ ಅಧಿವೇಶನ ಮುಗಿದ ತಕ್ಷಣ ಅನುದಾನ ಬಿಡುಗಡೆಗೆ ಕ್ರ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರನ್ನು ಭೇಟಿಯಾಗಿ ಸರ್ಕಾರದಿಂದ ಅನುದಾನ ಬಿಡುಗಡೆಗೆ ಸಹಕರಿಸುವಂತೆ ಮನವಿ ಮಾಡಲಾಯಿತು. ಬಳಿಕ ಶಾಸಕ ಡಾ.ಆಶ್ವತ್ಥ ನಾರಾಯಣ ಅವರನ್ನು ಭೇಟಿಯಾಗಿ ಆರ್ಥಿಕ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಯಿತು. ವೈಯಕ್ತಿಕ ನೆಲೆಯಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ಕಡಬ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ತಿಳಿಸಿದ್ದಾರೆ.
ನಿಯೋಗದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಕಿರಣ್ ಕುಮಾರ್ ಬುಡ್ಲೆಗತ್ತು, ಶಿವರಾಮ ಏನೆಕಲ್ಲು, ರಂಜಿತ್ ಪದಕಂಡ, ಗೋಪಾಲ ಎಣ್ಣೆಮಜಲು, ಭರತ್ ಮುಂಡೋಡಿ, ಗಣೇಶ್ ನಾಯರ್ ಮೊದಲಾದವರು ಇದ್ದರು.