ವಯೋಸಹಜ ಕಾಯಿಲೆಗೆ ಬೇಸತ್ತು ವಿಷ ಸೇವಿಸಿ ವೃದ್ಧ ಆತ್ಮಹತ್ಯೆ

Crime Logo
Published on

ಹಾವೇರಿ: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಳೆರಿತ್ತಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ಪುಟ್ಟನಗೌಡ ಹನುಮಂತಗೌಡ ಹನುಮಗೌಡ್ರ (70) ಮೃತ ವೃದ್ಧರು.
ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net