

ಲಕ್ಷ್ಮೇಶ್ವರ: ಸಮೀಪದ ಗುಲಗಂಜಿಕೊಪ್ಪ ಗ್ರಾಮದ ಮಹಿಳೆ ನೀಲವ್ವ ಬಸಪ್ಪ ದಂಡಿನ (64) ಭಾನುವಾರ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಮೃತಪಟ್ಟಿದ್ದಾರೆ. ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ನೀಲವ್ವ ಅವರು ತಮ್ಮ ಜಮೀನಿನಲ್ಲಿ ಕಸ ಕೀಳುವ ವೇಳೆಯಲ್ಲಿ ವಿಷಕಾರಿ ಹಾವು ಕಚ್ಚಿದೆ. ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.