ಕೆರೆಗೆ ಬಿದ್ದು ವೃದ್ಧ ಆತ್ಮಹತ್ಯೆ

suicide
Published on

ದಾವಣಗೆರೆ: ವೃದ್ಧರೊಬ್ಬರು ನಗರದ ಕುಂದುವಾಡ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ಗುರುವಾರ ಬೆಳಕಿಗೆ ಬಂದಿದೆ.

ಬೆಂಗಳೂರಿನ ನಿವಾಸಿಯಾಗಿದ್ದ, ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ ಅಣ್ಣಪ್ಪ (78) ಆತ್ಮಹತ್ಯೆ ಮಾಡಿಕೊಂಡವರು.

ಬೆಂಗಳೂರಿನಲ್ಲಿ ಪುತ್ರಿಯ ಮನೆಯಲ್ಲಿ ವಾಸವಾಗಿದ್ದ ಅವರು ದಾವಣಗೆರೆಯಲ್ಲಿರುವ ತಮ್ಮನ ಮನೆಗೆ ಬಂದಿದ್ದರು. ಸೋಮವಾರ ದೇವಸ್ಥಾನಗಳಿಗೆ ಹೋಗಿ ಹರಕೆ ತೀರಿಸಿ ಬಂದಿದ್ದರು. ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಗುರುವಾರ ಬೆಳಗ್ಗೆ ಕುಂದುವಾಡ ಕೆರೆಯಲ್ಲಿ ಶವ ಪತ್ತೆಯಾಗಿದೆ.

ಅವರಿಗೆ ಒಂಟಿತನ ಕಾಡುತ್ತಿತ್ತು, ಆತ್ಮಹತ್ಯೆಗೆ ಇದೇ ಕಾರಣ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net