ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸಿ

11 Sirwar 1
Published on

ಸಿರವಾರ: ಏಳನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಸೀಲ್ದಾರ್ ರವಿ ಎಸ್.ಅಂಗಡಿಗೆ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.

ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಯೋಜನೆಯನ್ನು ಮರುಸ್ಥಾಪಿಸಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಲಾಯಿತು. ನರಸಿಂಗ್, ಕೇಶಪ್ಪ ಕಮ್ಮಾರ್, ರಾಘವೇಂದ್ರ ಇಟಗಿ, ತಿಮ್ಮಣ್ಣ ಬಲ್ಲಟಗಿ, ಚನ್ನವೀರಯ್ಯ ಹೊಸಮಠ, ದೇವೆಂದ್ರ ನಾಯ್ಕ, ಆರೀಫ್ ಮಿಯಾ, ಶಿವಣ್ಣ, ಬಸವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net