ಸ್ವಂತ ಹಣದಿಂದ ರಸ್ತೆ ಗುಂಡಿ ಮುಚ್ಚಿಸಿದ ವೃದ್ಧರು

12 HANUR 4
ಹನೂರು ತೊಮಿಯಾರ್ ಪಾಳ್ಯ ಮಾರ್ಗದಲ್ಲಿ ನಿರ್ಮಾಣವಾಗಿದ್ದ ಗುಂಡಿಗಳನ್ನು ಸ್ವಂತ ಹಣದಿಂದ ಮುಚ್ಚಿಸಿದ ಮಹಿಮಾದಾಸ್ ಹಾಗೂ ರಾಜು.
Published on

ಹನೂರು: ಪಟ್ಟಣದಿಂದ ತೊಮಿಯಾರ್ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಗುಂಡಿಗಳಿಗೆ ಮಂಗಳವಾರ ಇಬ್ಬರು ವೃದ್ಧರು ಸ್ವಂತ ಹಣದಿಂದ ಮಣ್ಣು ಹಾಕಿಸಿ ಮುಚ್ಚಿಸಿದ್ದಾರೆ.

ಈ ಮಾರ್ಗದ ರಸ್ತೆಯ ಬಹುತೇಕ ಕಡೆಗಳಲ್ಲಿ ಹಲವು ವರ್ಷಗಳಿಂದ ಗುಂಡಿಗಳು ನಿರ್ಮಾಣವಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗಿತ್ತು. ಅದರಲ್ಲೂ ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡಬೇಕಿತ್ತು. ಈ ವೇಳೆ ಗುಂಡಿಗಳನ್ನು ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಈಗೀರುವಾಗ ಕಳೆದ ಒಂದು ತಿಂಗಳಿನಿಂದ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದಾಗಿ ಗುಂಡಿಗಳ ಗಾತ್ರ ಹೆಚ್ಚಾಗಿದೆ.

ರಸ್ತೆ ಅಭಿವೃದ್ಧಿಪಡಿಸುವಂತೆ ಈ ಭಾಗದ ಜನರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮವಾಗಿರಲಿಲ್ಲ. ಇದರಿಂದ ಬೇಸತ್ತಾ ತೊಮಿಯಾರ್‌ಪಾಳ್ಯದ ರಾಜು ಹಾಗೂ ಮಹಿಮಾದಾಸ್ ಅವರು ಸ್ವಂತ ಹಣದಿಂದ ಜೆಸಿಬಿ ಮೂಲಕ ಗುಂಡಿಗಳಿಗೆ ಮಣ್ಣು ಹಾಕಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net