ಹಳೇ ವಿದ್ಯಾರ್ಥಿಗಳ ಪುನರ್ಮಿಲನ

New Project (5)
Published on

ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1977-78ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉಪ್ಪಿನಂಗಡಿಯಲ್ಲಿ ನಡೆಯಿತು.

25 ಮಂದಿ ಸಹಪಾಠಿಗಳು ಮತ್ತೆ ತಾವು ಕಲಿತ ತರಗತಿಯಲ್ಲಿ ಒಗ್ಗೂಡಿದ್ದು ಅಂದು ಪಾಠ ಮಾಡುತ್ತಿದ್ದ ಶಿಕ್ಷಕರಾದ ಎಂ.ನಾರಾಯಣ ಭಟ್ ಮತ್ತು ಕಾಂಚನ ಸುಂದರ ಭಟ್ ಅವರಿಗೆ ಗುರುವಂದನೆ ಸಲ್ಲಿಸಿದರು.

ರುಕ್ಮಿಣಿ ಪ್ರಾರ್ಥಿಸಿದರು. ಡಾ.ಗೋವಿಂದ ಪ್ರಸಾದ್ ಕಜೆ ಸ್ವಾಗತಿಸಿದರು. ಗೋಪಾಲಕೃಷ್ಣ ಭಟ್ ಪ್ರಾಸ್ತಾವಿಕ ಮಾತನಾಡಿದರು. ವಿಜಯಕುಮಾರ್ ಕಲ್ಲಳಿಕೆ ವಂದಿಸಿದರು. ಜಲಿಲ್ ಮುಕ್ರಿ ಕಾರ್ಯಕ್ರಮ ನಿರೂಪಿಸಿದರು. ಕರಾಯ ಗಣೇಶ್ ನಾಯಕ್ ಭೋಜನದ ಪ್ರಾಯೋಜಕತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net