ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

vidyarthi sammilana
ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಿತು.
Published on

ಗಂಗೊಳ್ಳಿ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಶನಿವಾರ ನಡೆಯಿತು.

ಸುರತ್ಕಲ್ ಗೋವಿಂದದಾಸ ಕಾಲೇಜಿನ ಉಪನ್ಯಾಸಕ ಚವನ್ ಹೆಗ್ಡೆ ಮತ್ತು ತಂಡ ವಿಶಿಷ್ಟ ಟೆಲಿಸ್ಕೊಪ್‌ನ ಮೂಲಕ ಆಕಾಶಕಾಯಗಳನ್ನು ದರ್ಶಿಸಿ, ಅವುಗಳ ಸ್ಥಾನ ಮತ್ತು ಪರಿಭ್ರಮಣ, ಸೂರ್ಯ ಮತ್ತು ಚಂದ್ರ ಗ್ರಹಣಗಳ ಕುರಿತಾದ ಮಹತ್ವದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಬಾಲಕರಿಗಾಗಿ ಕ್ರಿಕೆಟ್, ಅಂಬಾರಿ ರೇಸ್, ರನ್ನಿಂಗ್ ರೇಸ್ ಹಾಗೂ ಬಾಲಕಿಯರಿಗಾಗಿ ಥ್ರೋಬಾಲ್, ಗೋಣಿಚೀಲ ಓಟ, ರಂಗೋಲಿ, ಮೆಹಂದಿ ಬಿಡಿಸುವ ಸ್ಪರ್ಧೆಗಳನ್ನು ನಡೆಸಲಾಯಿತು. ಸಂಜೆ ಹಳೇ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಜಾದೂಗಾರ ಸತೀಶ್ ಹೆಮ್ಮಾಡಿ ಸಾರಥ್ಯದ ಭ್ರಮಾಲೋಕ ಜಾದೂ ತಂಡದಿಂದ ಜಾದೂ ಪ್ರದರ್ಶನ ಹಾಗೂ ಡಾ.ಗಣೇಶ್ ಗಂಗೊಳ್ಳಿ ಮತ್ತು ರಾಜೇಶ್ ಶ್ಯಾನುಭಾಗ್ ಅವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಿತು. ರಮಾದೇವಿ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಶರಣಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪ ಪ್ರಾಂಶುಪಾಲ ರಾಮದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಸದಾರಾಂ, ಶಿಕ್ಷಕ ಹಾಗೂ ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net