ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧೆ ಆತ್ಮಹತ್ಯೆ

hang
Published on

ಕಾರ್ಕಳ: ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಸೋಮವಾರ ನೇಣಿಗೆ ಶರಣಾಗಿದ್ದಾರೆ. ಕಾರ್ಕಳದ ಪತ್ತೋಂಜಿಕಟ್ಟೆ ನಿವಾಸಿ ಸರೋಜಿನಿ (73) ಆತ್ಮಹತ್ಯೆ ಮಾಡಿಕೊಂಡವರು. ಇವರು 8 ವರ್ಷಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕಾಯಿಲೆ ಗುಣಮುಖವಾಗದ ಕಾರಣ ಜೀವನದಲ್ಲಿ ಜಿಗುಪ್ಪೆಗೊಂಡು ತಮ್ಮ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net