ಬೈಕ್ ಡಿಕ್ಕಿಯಾಗಿ ವೃದ್ಧೆ ಸಾವು

GANGAMMA
Published on

ಹನೂರು: ತಾಲೂಕಿನ ಶಾಗ್ಯ-ಬೀರೂಟ ಮಾರ್ಗದಲ್ಲಿ ಶುಕ್ರವಾರ ಸಂಜೆ ಬೈಕ್ ಡಿಕ್ಕಿಯಾದ ಪರಿಣಾಮ ನೀರು ಹೊತ್ತೋಯ್ಯುತ್ತಿದ್ದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಾಗ್ಯ ಗ್ರಾಮದ ಗಂಗಮ್ಮ (67) ಮೃತರು. ಇವರು ಗ್ರಾಮ ಸಮೀಪದ ತೋಟದ ಮನೆಯಲ್ಲಿ ವಾಸಿಸುತ್ತಿದ್ದು, ಸಂಜೆ 5.30ರ ಸುಮಾರಿಗೆ ಸಮೀಪದ ಜಮೀನಿನ ಪಂಪ್‌ಸೆಟ್‌ನಿಂದ ನೀರು ಹೊತ್ತೋಯ್ಯುತ್ತಿದ್ದರು. ಈ ವೇಳೆ ಗ್ರಾಮದ ಲೋಕೇಶ್ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಗಂಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಮೃತರ ಪುತ್ರ ಶಿವಮೂರ್ತಿ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಬಳಿಕ ಮೃತದೇಹವನ್ನು ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net