ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ನದಿಗೆ ಹಾರಿ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ತುಂಗಭದ್ರಾ ನದಿಗೆ ಹಾರಿ ಮೃತಪಟ್ಟ ಘಟನೆ ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಸಾರಥಿ ಗ್ರಾಮದ ಹನುಮವ್ವ ಭೀಮಪ್ಪ ಅಳದರ (61) ಮೃತ ವೃದ್ಧೆ.
ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾರಣ ಮನನೊಂದು ಮನೆಯಿಂದ ಬಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net