ವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದರೋಡೆ

Akku
Published on

ಬೆಳ್ತಂಗಡಿ: ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಂದು ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಮೃತರು. ಅಕ್ಕು ಅವರು ಪುತ್ರ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದು, ಮಗ ಮತ್ತು ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ಹೊರಗೆ ಬಂದು ನೋಡಿದಾಗ ಅಜ್ಜಿ ಅಕ್ಕು ಅವರು ತಮ್ಮ ಮನೆ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡು ಬಂದು ಪಾಲಕರಿಗೆ ವಿಷಯ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ದರೋಡೆಗೈದಿರುವುದು ಬೆಳಕಿಗೆ ಬಂದಿದೆ.

ದುಷ್ಕರ್ಮಿಗಳು ಕೊಲೆಗೈದು ಚಿನ್ನಾಭರಣ ದರೋಡೆಗೈದಿರಬೇಕೆಂದು ಸಂಶಯಿಸಲಾಗಿದೆ. ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net