ಯತ್ನಾಳ್‌ರನ್ನು ಲಿಂಗಾಯತ ಸಮುದಾಯ ದೂರವಿಡಲಿ: ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ಹೇಳಿಕೆ

Omkara Swamiji press conference Mandya
Published on

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಸಮಾಧಾನಗೊಂಡಿದ್ದಾರೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು.

ಲಿಂಗಾಯತರಾಗಿ ಸಮುದಾಯವನ್ನು ಶಕ್ತಿಯಾಗಿ ಬಳಸಿಕೊಂಡು ಶಾಸಕ ಸ್ಥಾನವನ್ನು ಅಲಂಕರಿಸಿದ್ದಾರೆ. ಆದರೀಗ ಬಸವಣ್ಣನವರ ವಿರುದ್ಧ ಹೇಳಿಕೆ ನೀಡಿರುವುದು ಅಸಹನೀಯ. ಈ ರೀತಿಯ ಮಾತುಗಳನ್ನು ಆಡಿದವರನ್ನು ಸಮುದಾಯ ಕ್ಷಮಿಸುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶಗೊಂಡರು.

ಪ್ರಚಾರಕ್ಕಾಗಿ ಬಸವಣ್ಣನವರನ್ನು ಹೀಯಾಳಿಸುವ ಮಟ್ಟಕ್ಕೆ ಮಾತುಗಳನ್ನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ. ತಮ್ಮ ಹೇಳಿಕೆಯ ಮೂಲಕ ಬಸವತತ್ವದ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದು ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು ಎಂದು ಕರೆ ನೀಡಿದರು.

ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಮಾತನಾಡಿ, ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಾಲ್ಲ. ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಶಿವಲಿಂಗಪ್ಪ, ಶಿವರುದ್ರಸ್ವಾಮಿ, ಬೆಳ್ಳಪ್ಪ, ಆನಂದ್, ವೀರಭದ್ರಯ್ಯ, ಮಂಜುನಾಥ್, ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net