

ಮೈಸೂರು: ಅದಮ್ಯ ರಂಗಶಾಲೆಯ ವತಿಯಿಂದ ನಡೆಯುತ್ತಿರುವ ‘ಬಾಲಂಗೋಚಿ’ ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ಮತ್ತು ಮಕ್ಕಳ ನಾಟಕ ಹಾಗೂ ಜಾನಪದ ನೃತ್ಯ ಪ್ರದರ್ಶನ ಸಮಾರಂಭವು ಮೇ 14 ರಂದು ಸಂಜೆ 5.30ಕ್ಕೆ ನಗರದ ಜಯಲಕ್ಷ್ಮಿಪುರಂನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು ರಂಗಶಾಲೆಯ ಕಾರ್ಯದರ್ಶಿ ಚಂದ್ರು ಮಂಡ್ಯ ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಜೆ.ಶಶಿಧರ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ.ಡಿ.ವಿಜಯಲಕ್ಷ್ಮಿ ಉದ್ಘಾಟನೆ ಮಾಡುವರು. ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ನಗರದ ಕೆನರಾ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಎಸ್.ರಾಜ, ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಈ.ಸಿ. ನಿಂಗರಾಜ್ ಗೌಡ ಪಾಲ್ಗೊಳ್ಳುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಿಬಿರದ ಮಕ್ಕಳಿಂದ ಖ್ಯಾತ ಸಾಹಿತಿ ವೈದೇಹಿ ರಚನೆಯ ‘ಕತ್ತಲೆ ನಗರಿ’ ಮತ್ತು ಚಂದ್ರು ಮಂಡ್ಯ ರಚನೆಯ ’ಕಾಡಿನ ನಕ್ಷತ್ರಗಳು’ ನಾಟಕಗಳ ಹಾಗೂ ಜಾನಪದ ನೃತ್ಯದ ಪ್ರದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8660103141ಸಂಪರ್ಕಿಸಬಹುದು ಎಂದು ತಿಳಿಸಿದರು.