17ರಂದು ಕಲ್ಯಾಣ ಕರ್ನಾಟಕ ಉತ್ಸವ

MEET
ಸಿಂಧನೂರು ತಾಲೂಕು ಆಡಳಿತ ಸೌಧದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು. ತಹಸೀಲ್ದಾರ್ ಅರುಣ ದೇಸಾಯಿ, ಬಿಸಿಎಂ ಅಧಿಕಾರಿ ಲಿಂಗನಗೌಡ, ಜಿಪಂ ಉಪವಿಭಾಗ ಅಧಿಕಾರಿ ಶಿವಪ್ಪ, ನಗರಸಭೆಯ ಕಿಶನ್‌ರಾವ್, ತಾಲೂಕು ವಿಶ್ವಕರ್ಮ ಸಮುದಾಯ ಅಧ್ಯಕ್ಷ ವೀರಭದ್ರಪ್ಪ ವಿಶ್ವಕರ್ಮ ಇದ್ದರು.
Published on

ಸಿಂಧನೂರು: ಕಲ್ಯಾಣ ಕರ್ನಾಟಕ ಉತ್ಸವವನ್ನು ಸೆ.17ರಂದು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿದ್ದು ಆಯಾ ಇಲಾಖೆಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಅರುಣ ದೇಸಾಯಿ ತಿಳಿಸಿದರು.

ಸ್ಥಳೀಯ ತಾಲೂಕು ಆಡಳಿತಸೌಧದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂದು ಬೆಳಗ್ಗೆ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಮಹಾತ್ಮಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು. ಪೊಲೀಸ್ ಹಾಗೂ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿದೆ.

ವಿಶ್ವಕರ್ಮ ಜಯಂತಿ

ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕು ಮಟ್ಟದ ಎಲ್ಲ ಸರ್ಕಾರಿ ಇಲಾಖೆ, ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಬೇಕು. ಅಂದು ತಾಲೂಕು ಆಡಳಿತದಿಂದ ವಿಶ್ವಕರ್ಮ ಜಯಂತಿ ನಡೆಯಲಿದೆ.

ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಜಯಂತಿ ಆಚರಿಸಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಸ್. ವಿಜಯಾ, ಬಿಸಿಎಂ ಅಧಿಕಾರಿ ಲಿಂಗನಗೌಡ, ಜಿಪಂ ಉಪವಿಭಾಗ ಅಧಿಕಾರಿ ಶಿವಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net