25ರಂದು ಅಂಬೇಡ್ಕರ್ ಪ್ರತಿಮೆ ಅನಾವರಣ

2Huk1
Published on

ಹುಕ್ಕೇರಿ: ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಷ್ಠಾಪಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಸಮಾರಂಭವನ್ನು ಜ.25 ರಂದು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ನಿರ್ದೇಶಕ ಸುರೇಶ ತಳವಾರ ಹೇಳಿದರು.

ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಸಮಾರಂಭದ ಕುರಿತು ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಾಜಿ ಸಂಸದ ರಮೇಶ ಕತ್ತಿ, ಶಾಸಕ ನಿಖಿಲ ಕತ್ತಿ ನೇತೃತ್ವದಲ್ಲಿ ನಡೆಯುವ ಸಮಾರಂಭಕ್ಕೆ ಗೃಹ ಸಚಿವ ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಭೌದ್ಧ ಬಿಕ್ಷುಗಳಾದ ಭಂತೇಜಿ, ಮೈಸೂರು ಜ್ಞಾನಪ್ರಕಾಶ ಸ್ವಾಮೀಜಿ ಸೇರಿ ವಿವಿಧ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಉದಯ ಹುಕ್ಕೇರಿ, ದಿಲೀಪ ಹೊಸಮನಿ, ಶ್ರೀಕಾಂತ ತಳವಾರ, ಛಲವಾದಿ ಮಹಾಸಭೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ ಮಾತನಾಡಿದರು.

ಮುಖಂಡರಾದ ರಮೇಶ ಹುಂಜಿ, ಸದಾಶಿವ ಕಾಂಬಳೆ, ಚಿದಾನಂದ ಹಿರೇಕೆಂಚನವರ, ಬಾವುಸಾಹೇಬ ಪಾಂಡರೆ, ಅಕ್ಷಯ ವೀರಮುಖ, ರವಿ ಕಾಂಬಳೆ, ಕೆ.ವೆಂಕಟೇಶ, ಅಪಣ್ಣ ಖಾತೇದಾರ, ಶಂಕರ ತಿಪ್ಪನಾಯಿಕ, ಪ್ರಕಾಶ ಮೈಲಾಖೆ, ಶಿವು ಕಣಗಲಿ, ಶಿವು ಮಾಳಗೆ, ಕಾಶಪ್ಪ ಹರಿಜನ, ಶಾಂತಾ ಹೆಳವಿ ಇತರರಿದ್ದರು. ಕೆಂಪಣ್ಣ ಶಿರಹಟ್ಟಿ ಸ್ವಾಗತಿಸಿದರು. ವಕೀಲ ರಾಜೇಂದ್ರ ಮೋಶಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net