

ಕಾಸರಗೋಡು: ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಗೆ ಸಜ್ಜುಗೊಂಡಿರುವ ಕಾಸರಗೋಡಿನ ಪ್ರಸಿದ್ಧ ಪುಣ್ಯಕ್ಷೇತ್ರ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಶಿಲಾಮಯ ಮಹಾದ್ವಾರ ಮತ್ತು ರಾಜಾಂಗಣದ ಉದ್ಘಾಟನೆ ಮಾ.26ರಂದು ಬೆಳಗ್ಗೆ 10ಕ್ಕೆ ಜರುಗಲಿದೆ. ಒಂದೂವರೆ ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ದ್ರಾವಿಡ ಶೈಲಿಯಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ.
ಕೇಂದ್ರ ಸಚಿವ ಸುರೇಶ್‌ಗೋಪಿ ಮಹಾದ್ವಾರ ಲೋಕಾರ್ಪಣೆಗೊಳಿಸುವರು. ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ, ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ನಾಡೋಜ ಜಿ.ಶಂಕರ್ ಉಡುಪಿ, ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡ, ಕೆ.ಕೆ.ಶೆಟ್ಟಿ ಕುತ್ತಿಕ್ಕಾರ್ ಅಹಮದ್‌ನಗರ, ಕನ್ಯಾನ ರಘುರಾಮ ಶೆಟ್ಟಿ ಬಿ.ಕೆ, ಯಕ್ಷಧ್ರವ ಪಟ್ಲ ಫೌಂಡೇಷನ್ ನಿರ್ದೇಶಕ ಸತೀಶ್ ಶೆಟ್ಟಿ ಪಟ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವಾ ಸಮಿತಿ ಅಧ್ಯಕ್ಷ ಡಾ.ಬಿ.ಎಸ್.ರಾವ್ ಅಧ್ಯಕ್ಷ ತೆ ವಹಿಸುವರು. ದಾನಿ ಮುಂಬೈ ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅವರ ಕೊಡುಗೆಯಾಗಿ ಮಹಾದ್ವಾರ ನಿರ್ಮಿಸಲಾಗಿದೆ.