

ಮೈಸೂರು: ಸಂವಹನ ಪ್ರಕಾಶಕರು ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ.27ರಂದು ‘ಶಿವರಾಮು ಕಾಡನಕುಪ್ಪೆ’ ಸಂಸ್ಮರಣ ಗ್ರಂಥ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಿ.ಪಿ.ಬಸವರಾಜು ಸಂಸ್ಮರಣ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಪ್ರಗತಿಪರ ಚಿಂತಕ ಪ.ಮಲ್ಲೇಶ್ ಅಧ್ಯಕ್ಷತೆ ವಹಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ
ಗೋಪಾಲ್, ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಜಿ.ಚಂದ್ರಶೇಖರ್, ಡಾ.ಕೆ.ಕಾಳಚನ್ನೇಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ..