

ಸಿಂಧನೂರು: ಕಲಬುರಗಿಯಲ್ಲಿ ಜ.29 ರಂದು ನಡೆಯುವ ಶ್ರೀ ಕೊತ್ತಲ ಭಾರತೀಯ ಶಿಕ್ಷಣ ಸಮಿತಿ ಹಾಗೂ ಭಾರತ ವಿಕಾಸ ಸಂಗಮ ಮತ್ತು ವಿಕಾಸ ಅಕಾಡೆಮಿ ಆಶ್ರಯಲ್ಲಿ ಭಾರತೀಯ ಸಾಂಸ್ಕೃತಿಕ ಉತ್ಸವದಲ್ಲಿ 40 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ವಿಕಾಸ ಅಕಾಡೆಮಿಯ ಮುಖ್ಯ ಸಂಯೋಜಕ ಬಸವರಾಜ ಪಾಟೀಲ್ ಸೇಡಂ ತಿಳಿಸಿದರು.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಸಿಂಧನೂರಿನ ರೈತರು, ಶಾಲಾ ಸಂಸ್ಥೆಯವರು, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕು. ಸುಮಾರು 30-40 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು.