

ಮಡಿಕೇರಿ: ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ನಮ್ಮ ನಡೆ ಮತಗಟ್ಟೆಯ ಕಡೆಗೆ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ಏ.೩೦ ರಂದು ಬೆಳಗ್ಗೆ ೮ ಗಂಟೆಗೆ ನಡೆಯಲಿದೆ ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್‌ರವರು ತಿಳಿಸಿದ್ದಾರೆ.
ಜಿಲ್ಲೆಯ ೧೦೩ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಪ್ರತಿ ಗ್ರಾಮ ಪಂಚಾಯತಿಯ ೧ ಮತಗಟ್ಟೆಯಲ್ಲಿ ಏ.೩೦ ರಂದು ಬೆಳಗ್ಗೆ ೮ ಗಂಟೆಗೆ ಧ್ವಜಾರೋಹಣ ನೆರವೇರಿಸಲು ಕ್ರಮವಹಿಸಲಾಗುತ್ತದೆ. ಧ್ವಜಾರೋಹಣ ನೆರವೇರಿಸುವ ಸ್ಥಳವನ್ನು ರಂಗೋಲಿಯಿಂದ ಹಾಗೂ ಇತರೆ ಕ್ರಮಗಳನ್ನು ವಹಿಸಿ ಅಲಂಕರಿಸುವುದು(ಮತದಾರರ ಜಾಗೃತಿಯ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಬಹುದು). ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ ಅಥವಾ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಿಎಲ್‌ಒ, ಪಂಚಾಯತಿ ಸಿಬ್ಬಂದಿಗಳು, ಪಂಚಾಯತಿ ವ್ಯಾಪ್ತಿಯ ಇತರೆ ಇಲಾಖೆಗಳ ಸಿಬ್ಬಂದಿಗಳು, ಸಾರ್ವಜನಿಕರು, ಯುವ ಮತದಾರರು, ವಿಶೇ?ಚೇತನ ಮತದಾರರು, ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭಾರತ ಚುನಾವಣಾ ಆಯೋಗ ಈ ವ?ರ್ ಬಿಡುಗಡೆ ಮಾಡಿರುವ ಚುನಾವಣಾ ಗೀತೆಯನ್ನು ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ೨೦೧೮ರಲ್ಲಿ ಬಿಡುಗಡೆ ಮಾಡಿರುವ ಚುನಾವಣಾ ಗೀತೆಗಳನ್ನು ಬಳಸಲಾಗುತ್ತದೆ ಎಂದು ಡಾ.ಎಸ್.ಆಕಾಶ್ ತಿಳಿಸಿದ್ದಾರೆ.