ಆ.೧೨ ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ

v.t.vishmai
Published on

ಮಡಿಕೇರಿ: ಮಡಿಕೇರಿ ತಾಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯರವರ ಗದ್ದೆಯಲ್ಲಿ ಆ.೧೨ ರಂದು ೨೦೨೩-೨೪ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.


ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಪ್ ಇಂಡಿಯಾ(ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ. ಉದ್ಘಾಟನಾ ಸಮಾರಂಭ ಆ.೧೨ ರಂದು ಬೆಳಗ್ಗೆ ೯ ಗಂಟೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್-೯೪೮೧೨೧೩೯೨೦, ಕುಂಜಿಲನ ಎಂ.ಮೋಹನ್-೯೪೮೦೬೪೬೩೮೨, ನವೀನ್ ದೇರಳ- ೯೪೪೯೯೫೨೦೦೮ನ್ನು ಸಂಪರ್ಕಿಸಬಹುದು ಎಂದು ವಿ.ಟಿ.ವಿಸ್ಮಯಿರವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net