ಆ.16ರಂದು ವೀರಭೂಮಿ ಲೋಕಾರ್ಪಣೆ

vital halagekar
Published on

ಖಾನಾಪುರ: ತಾಲೂಕಿನ ನಂದಗಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ನಿರ್ಮಿಸಿದ ವೀರಭೂಮಿಯನ್ನು ಆ.16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪ್ರಾಧಿಕಾರದ ಅಧ್ಯಕ್ಷ, ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ ಎಂದರು. ಖಾನಾಪುರ ತಾಲೂಕಿನ ನಂದಗಡ ಹಾಗೂ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮಗಳಲ್ಲಿ ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿ ಹಾಗೂ ಸೌಂದರ್ಯಿಕರಣಕ್ಕಾಗಿ 28 ಕೋಟಿ.ರೂ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

ನಂದಗಡದ ಐತಿಹಾಸಿಕ ಕಮಲ ಸರೋವರ ಸುಂದರಗೊಳಿಸುವ ಕೆಲಸ ನಡೆಯುತ್ತಿದೆ. ಸರೋವರದ ಮಧ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲಾಗಿದೆ. ಈ ಸರೋವರದ ಸುತ್ತಲೂ ಕಾಂಪೌಂಡ್, ಚರಂಡಿ ನಿರ್ಮಿಸುವ ಮೂಲಕ ಅಭಿವೃದ್ಧಿಪಡಿಸಲು ಪ್ರಾಧಿಕಾರ ಹೆಚ್ಚುವರಿಯಾಗಿ 3 ಕೋಟಿ ರೂ.ಮೀಸಲಿರಿಸಿದ ಬಗ್ಗೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net