ಸೈಬರ್ ಅಪರಾಧಗಳ ಕುರಿತು ಜಾಗೃತಿ ಅವಶ್ಯಕ

19Anand3
Published on

ಬೆಳಗಾವಿ: ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಕುರಿತು ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಓಯಾಸಿಸ್ ಇಂಡಿಯಾ ಸಂಸ್ಥೆ ಮುಖ್ಯಸ್ಥ ಡ್ಯಾನಿಯಲ್ ಬಾಬರಾಜ ಅಭಿಪ್ರಾಯಪಟ್ಟರು.

ಹುಕ್ಕೇರಿ ತಾಲೂಕಿನ ಯರಗಟ್ಟಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓಯಾಸಿಸ್ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಜಂಟಿಯಾಗಿ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಈಚೆಗೆ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ಹಾಗೂ ಡಿಜಿಟಲ್ ಸುರಕ್ಷತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಂಗೀತಾ ಮಾತನಾಡಿ, ಸಂವಹನ ಮತ್ತು ಶಿಕ್ಷಣದಿಂದ ಆರೋಗ್ಯ ರಕ್ಷಣೆ ಮತ್ತು ವ್ಯವಹಾರದವರೆಗೆ ಡಿಜಿಟಲ್ ಪರಿಕರಗಳು ಜೀವನದ ಪ್ರತಿಯೊಂದು ಅಂಶಕ್ಕೂ ಅವಿಭಾಜ್ಯವಾಗಿದೆ. ತಂತ್ರಜ್ಞಾನ ವಿಕಸನಗೊಳ್ಳುತ್ತಲೇ ಇರುವುದರಿಂದ ವಿದ್ಯಾರ್ಥಿಗಳನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡಬೇಕಿದೆ ಎಂದರು. ಪ್ರಾಚಾರ್ಯ ಕಿರಣ ಚೌಗಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಗೀತಾ ಬೆಳಮರಡಿ, ವೀಣಾ ಮ್ಯಾಗೇರಿ, ರೇಷ್ಮಾ ಗೋರಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net