ಡಿ.15ರಂದು ಕೃಷಿಕ ಸಮಾಜದ ಚುನಾವಣೆ

Published on

ಕಂಪ್ಲಿ: ತಾಲೂಕು ಕೃಷಿಕ ಸಮಾಜ ಚುನಾವಣೆ ವೇಳಾಪಟ್ಟಿ ಬಿಡುಗಡೆಗೊಂಡಿದೆ. ತಾಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಗೆ ಡಿ.6ರಂದು ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.

ಡಿ.7ರಂದು ನಾಮಪತ್ರ ಪರಿಶೀಲನೆ, ಡಿ.9ರಂದು ನಾಮಪತ್ರ ವಾಪಸ್ ಪಡೆಯುವುದು, ಡಿ.15ರಂದು ಬೆಳಗ್ಗೆ 8ಗಂಟೆಯಿಂದ ಮಧ್ಯಾಹ್ನ 3ಗಂಟೆತನಕ ತಾಲೂಕು ಕೃಷಿಕ ಸಮಾಜದ ಚುನಾವಣೆ ನಡೆಯಲಿದೆ. ನಂತರ ಮತ ಎಣಿಕೆ ಮಾಡಿ ಫಲಿತಾಂಶ ಘೋಷಿಸಲಾಗುತ್ತದೆ.

ಡಿ.31ರಂದು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಹಾಗೂ ಜಿಲ್ಲಾ ಪ್ರತಿನಿಧಿ ಆಯ್ಕೆಗೆ ಚುನಾವಣೆ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net