ನ.4 ರಂದು ವಿದ್ಯಾರ್ಥಿಗಳಿಗೆ ಉಪನ್ಯಾಸ

Published on

ಮಾನ್ವಿ: ಸ್ಥಳೀಯ ಜ್ಞಾನ ವಿದ್ಯಾ ಪೀಠ ಟ್ರಸ್ಟ್‌ವತಿಯಿಂದ ನ.4 ರಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗೆ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಬಿಇಒ ಚಂದ್ರಶೇಖರ ದೊಡ್ಡಮನಿ ತಿಳಿಸಿದ್ದಾರೆ.

ಯೋಗ ಗುರು ಅನ್ನದಾನಯ್ಯಸ್ವಾಮಿ ನೇತೃತ್ವದಲ್ಲಿ ವಿವಿಧ ಶಿಕ್ಷಣ ಪರಿಣತರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಹತ್ತನೆಯ ತರಗತಿ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಬೇಕು.

ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net