26ಕ್ಕೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಮುತ್ತಿಗೆ

Protest
Published on

ಮೈಸೂರು: ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೆ ಒತ್ತಾಯಿಸಿ ಮಾ.26ರಂದು ಬೆಳಗ್ಗೆ 11.30ಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಹಿನಕಲ್‌ನಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು.

ಕೃಷಿ ಪಂಪ್ ಸೆಟ್‌ಗಳಿಗೆ 10 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವುದು ಸೇರಿದಂತೆ ಹಗಲು ವೇಳೆ ಸರ್ಕಾರದ ಆದೇಶದಂತೆ ಸಮರ್ಪಕ ವಿದ್ಯುತ್ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ರೈತರಿಗೆ ಸೋಲಾರ್ ಪಂಪ್‌ಸೆಟ್‌ಅನ್ನು ವೈಯಕ್ತಿಕವಾಗಿ ಅಳವಡಿಸಿಕೊಳ್ಳಲು ಇಲಾಖೆ ಪ್ರೇರೇಪಿಸುತ್ತಿರುವುದು ಸರಿಯಲ್ಲ. ಕಳೆದ ಸಾಲಿನಲ್ಲಿ ಇದ್ದಂತೆ ಅಕ್ರಮ ಸಕ್ರಮವನ್ನು ಜಾರಿ ಮಾಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net