30ರಂದು ಬಣಜಿಗ ಸಮಾಜದ ಸಮಾವೇಶ

Published on

ಮಸ್ಕಿ: ಪಟ್ಟಣದಲ್ಲಿ ಜು.30ರಂದು ಬಣಜಿಗ ಸಮಾಜದ ತಾಲೂಕು ಸಮಾವೇಶ, ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ತಾಲೂಕು ಅಧ್ಯಕ್ಷ ವೀರೇಶ ಸೌದ್ರಿ ತಿಳಿಸಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕ ಗುರುಪಾಟೀಲ್ ಸಮಾಜದ ಜನಗಣತಿಯ ಫಾರ್ಮ್ ಬಿಡುಗಡೆ ಮಾಡಲಿದ್ದಾರೆ.

ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅತಿಥಿಗಳಾಗಿ ಭಾಗವಹಿಸುವರು. ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕಾಗಿ ಸಮಾಜ ಪ್ರಮುಖರಲ್ಲಿ ಹೆಸರು ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು. ಪ್ರಮುಖರಾದ ಅಮರೇಶ ಬ್ಯಾಳಿ, ಬಸವಲಿಂಗಪ್ಪ ಶಟ್ಟಿ, ಶಿವಕುಮಾರ ಬ್ಯಾಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net