

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸೆ.3ರಂದು ಬೆಳಗ್ಗೆ 11 ಗಂಟೆಗೆ ವಿವಿಧ ವೈದಿಕ ವಿಧಿ-ವಿಧಾನಗಳೊಂದಿಗೆ ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿದೆ.
ಶ್ರೀಗಳು 4 ವರ್ಷಗಳಿಂದ ಶ್ರೀಗುರುದೇವ ಮಠದಲ್ಲಿ ಚಾತುರ್ಮಾಸ್ಯ ವ್ರತ ದೀಕ್ಷೆ ಕೈಗೊಂಡಿದ್ದು, ಈ ವರ್ಷ ಭಟ್ಕಳ ತಾಲೂಕಿನ ಕರಿಕಲ್ ಶಾಖಾ ಮಠದಲ್ಲಿ ಕಳೆದ ಜು.21ರಿಂದ ಆ.30ರವರೆಗೆ 41 ದಿನಗಳ ಚಾತುರ್ಮಾಸ್ಯ ವ್ರತಾಚಾರಣೆ ಕೈಗೊಂಡಿದ್ದಾರೆ.
ಸೆ.3ರಂದು ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯುವ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಠದ ಟ್ರಸ್ಟಿ ತುಕಾರಾಮ್ ಸಾಲಿಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.