ಅರಣ್ಯವಾಸಿಗಳ ಬೆಂಗಳೂರು ಚಲೋ ನ. 7ರಂದು

bengaluru chalo
Published on

ಹೊನ್ನಾವರ: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿ ಅರಣ್ಯ ಭೂಮಿ ಹಕ್ಕು ನೀಡುವಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ನ. 7 ರಂದು ಬೆಂಗಳೂರು ಚಲೋ ನಡೆಸಲಾಗುವುದು. ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಪಟ್ಟಣದ ಶ್ರೀ ಮೂಡಗಣಪತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅರಣ್ಯವಾಸಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅರಣ್ಯವಾಸಿಗಳ ಭೂಮಿ ಹಕ್ಕಿನ ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದ್ದು ಭೂಮಿ ಹಕ್ಕಿನ ಸಮಸ್ಯೆ ನಿವಾರಣೆ ಕುರಿತು ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ತಾಲೂಕಿನಿಂದ ಮೂರು ಸಾವಿರಕ್ಕೂ ಹೆಚ್ಚು ಅತಿಕ್ರಮಣದಾರರು ಭಾಗವಹಿಸುವರು ಎಂದರು.

ಸಮಿತಿಯ ತಾಲೂಕು ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ನಗರ ಅಧ್ಷಕ್ಷ ಸುರೇಶ ಮೇಸ್ತ, ಜಿಲ್ಲಾ ಸಂಚಾಲಕ ರಾಮ ಮರಾಠಿ, ಸುರೇಶ ನಾಯ್ಕ ಕರ್ನಕೋಡ, ಸಚಿನ ನಾಯ್ಕ ಸಾಲ್ಕೋಡ, ಮಹೇಶ ನಾಯ್ಕ ಕಾನಕ್ಕಿ, ವಾಮನ ನಾಯ್ಕ ಮಂಕಿ ಮಾತನಾಡಿದರು.

ವಿನೋದ ನಾಯ್ಕ ಎಲ್ಕೊಟಕಿ, ಗೀರೀಶ ಚಿತ್ತಾರ, ಆರ್.ಪಿ. ನಾಯ್ಕ, ಗಜಾನನ ನಾಯ್ಕ ಸಾಲ್ಕೋಡ, ರಜತ ಶೇಖ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net