9ರಂದು ಸಿಎಂ ನಿವಾಸಕ್ಕೆ ಮುತ್ತಿಗೆ

04 yelandur 02
Published on

ಯಳಂದೂರು: ರಾಜ್ಯದ ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ತಾಲೂಕು ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಷಡಕ್ಷರಿ ಹೇಳಿದರು.


ಪಟ್ಟಣ ಪ್ರವಾಸಿ ಮಂದಿರಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಬ್ಬು ಬೆಳೆಗಾರರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಟನ್ ಕಬ್ಬು ಪೂರೈಕೆಗೆ ಸಕ್ಕರೆ ಕಾರ್ಖಾನೆಗಳು ಹೆಚ್ಚುವರಿಯಾಗಿ 150 ರೂ.ಗಳನ್ನು ಬೆಳೆಗಾರರಿಗೆ ನೀಡಬೇಕು. ಪ್ರಸುತ್ತ ಸಾಲಿನಲ್ಲಿ ಕಬ್ಬಿಗೆ ಹೆಚ್ಚುವರಿ ದರ ನಿಗದಿ ಮಾಡಬೇಕು. ಕಳೆದ 6 ವರ್ಷಗಳಿಂದ ಸಕ್ಕರೆ ಇಳುವರಿ ಕಡಿಮೆ ತೋರಿಸಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 9ರಂದು ಸಿಎಂ ನಿವಾಸ ಮುಂದೆ ಧರಣಿ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕೆಂದು ಮನವಿ ಮಾಡಿದರು.


ಸಂಘದ ಜಿಲ್ಲಾ ಉಪಾಧ್ಯಕ್ಷ ಮೂಡಲಪುರ ಶಿವಮೂರ್ತಿ, ಕಾರ್ಯದರ್ಶಿ ಮಹದೇವಸ್ವಾಮಿ, ಚಂದ್ರಶೇಖರ್, ಕಿನಕಹಳ್ಳಿ ಬಸವಣ್ಣ, ಉಡಿಗಾಲ ಸುಂದ್ರಪ್ಪ, ರೇವಣ್ಣ, ಗುರು ರಮೇಶ್, ಶಿವಣ್ಣ ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net