ಸರ್ಕಾರದಲ್ಲಿ ಒಂದೊದಡೆ ಹಗರಣ ಮತ್ತೊಂದೆಡೆ ಒತ್ತಡ

byr
Published on

ಶಿವಮೊಗ್ಗ: ಕಾಂಗ್ರೆಸ್ ಆಡಳಿತದಲ್ಲಿ ಒಂದು ಕಡೆ ರಾಜ್ಯದಲ್ಲಿ ಹಗರಣ ಇನ್ನೊಂದೆಡೆ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಹೆಸರು ಬರೆದಿಟ್ಟು ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಮಕ್ಕಳ ಹಗರಣ ಈಗ ಬೆಳಕಿಗೆ ಬಂದಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಆರ್.ಬಿ.ತಿಮ್ಮಾಪುರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ತಿಮ್ಮಾಪುರ ಕಳಿಸಿದ ವರ್ಗಾವಣೆ ಪಟ್ಟಿಗೆ ಸಿಎಂ ಕಚೇರಿಯಲ್ಲಿ ಬ್ರೇಕ್ ಹಾಕಲಾಗಿದೆ ಎಂದು ಬಿವೈಆರ್ ತಿಳಿಸಿದರು.

ವಕ್ಫ್ ಆಸ್ತಿ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆಸುತ್ತಿರುವ ಪ್ರತಿಭಟನೆಗೆ ಪಕ್ಷವೂ ಬೆಂಬಲ ನೀಡಿದೆ. ಕಿಸಾನ್ ಮೋರ್ಚಾ ಕೈಜೋಡಿಸಿದೆ. ವಿವಿಧ ಮಠಾಧೀಶರು ಇದರಲ್ಲಿ ಭಾಗವಹಿಸಿದ್ದಾರೆ. ಯತ್ನಾಳ್ ಪ್ರತಿಭಟನೆ ನಡೆಸುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net