

ಚಿತ್ರದುರ್ಗ: ನಗರದಲ್ಲಿ ಡಿ.18ರಂದು ಆಯೋಜಿಸಿರುವ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಗುವುದು ಎಂದು ಡಿಸಿ ಜಿಆರ್‌ಜೆ ದಿವ್ಯಾಪ್ರಭು ಹೇಳಿದರು. ಜಿಪಂನಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಅಂದು ಬೆಳಗ್ಗೆ 9ಗಂಟೆಗೆ ಕನಕ ವೃತ್ತದಿಂದ ಕ್ರೀಡಾಂಗಣದವರೆಗೂ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಮತ್ತು ಸಮಾ ರಂಭದಲ್ಲಿ ಎಲ್ಲ ಸಮಾಜ,ಸಂಘಟನೆಗಳು,ಸಮುದಾಯದವರೂ ಭಾಗವಹಿಸ ಬೇಕು. ವಿವಿಧ ಇಲಾಖೆ ಅಧಿಕಾರಿಗಳು ಸಮು ದಾಯದ ಮುಖಂಡರ ಸಹಕಾರದೊಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು.
ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ ಸೇರಿದಂತೆ ಅಗತ್ಯಸಿದ್ಧತೆಗಳಾಗುತ್ತಿವೆ. ಸಮಾರಂಭದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸ ಲಾಗಿದೆ. ಕನಕ ವೃತ್ತದಿಂದ ಮದಕರಿ ವೃತ್ತದವರೆಗೂ ಇರುವ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿರುವ ಎಲ್ಲ ಮಹನೀಯರ ಪುತ್ಥಳಿ ಗಳಿಗೆ ಹೂವಿನ ಅಲಂಕಾರ ಮಾಡಬೇಕು.
ಅಲ್ಲದೆ ವೃತ್ತಗಳನ್ನು ಅಲಂಕರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. ಪಾರ್ಕಿಂಗ್,ಬಂದೋಬಸ್ತ್ ವ್ಯವಸ್ಥೆ ಕ್ರಮ ವ ಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ವಕೀಲೆ ಭಾರ್ಗವಿ ದ್ರಾವಿಡ್ ಮಾತನಾಡಿ,ಮೆರವಣಿಗೆಯಲ್ಲಿ ಜಿಲ್ಲೆಯ ಶಾಲಾ- ಕಾ ಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬೇಕು ಮತ್ತು ಈ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಪ್ರದಾನ ಮಾಡುವಂತೆ ಮನವಿ ಮಾಡಿದರು. ಡಿಡಿಪಿಐ ಕೆ.ರವಿಶಂಕರ್‌ರೆಡ್ಡಿ,ಜಿಲ್ಲೆಯ ಪ್ರೌಢ ಶಾಲೆಗಳ 400-500 ವಿದ್ಯಾರ್ಥಿಗಳು ಒನಕೆ ಓಬವ್ವ ವೇಷಭೂಷಣದೊಂದಿಗೆ ಮೆರವಣಿ ಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ,ಪೂರ್ಣಕುಂಭದೊಂದಿಗೆ ಮಹಿಳೆಯರು ಭಾಗವಹಿಸಲಿದ್ದಾರೆ ಎಂದರು.
ರಾಜ್ಯಸಭಾ ಮಾಜಿ ಸದಸ್ಯ ಎಚ್.ಹನುಮಂತಪ್ಪ,ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ ಮಾತನಾಡಿದರು.ಜಿಪಂ ಡಿಎಸ್ ಡಾ.ರಂಗಸ್ವಾಮಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಚಲವಾದಿ,ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜು ನ್ ಮತ್ತಿತರರು ಇದ್ದರು.