ಒನಕೆ ಓಬವ್ವ ಜಯಂತಿ 11ರಂದು

images
Published on

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನ. 11ರಂದು ಬೆಳಗ್ಗೆ 11 ಗಂಟೆಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶೇಷ ಅತಿಥಿಯಾಗಿ ಆಗಮಿಸುವರು. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಜಗದೀಶ ಶೆಟ್ಟರ್, ವಿನಯ ಕುಲಕರ್ಣಿ, ಪ್ರಸಾದ ಅಬ್ಬಯ್ಯ, ಎನ್.ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಮೇಯರ್ ವೀಣಾ ಬರದ್ವಾಡ ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಜೆಎಸ್‌ಎಸ್ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವಿ.ಜಿ. ಪೂಜಾರ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net