

ಮಡಿಕೇರಿ:
ಸಮೀಪದ ಮೂರ್ನಾಡುವಿನಲ್ಲಿ ಸ್ಥಳೀಯ ಹಿಂದು ಮಲಯಾಳಿ ಸಂಘದ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ 17ನೇ ವರ್ಷದ ಓಣಂ ಹಬ್ಬಾಚರಣೆ ಸಂಭ್ರಮದಿAದ ನಡೆಯಿತು. ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು. ನಂತರ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದುಗಳು ತಮ್ಮ ತಮ್ಮಲ್ಲಿಯೆ ಆಚಾರ-ವಿಚಾರಗಳು ಬೇರೆ ಬೇರೆಯಾಗಿದ್ದರೂ ಎಲ್ಲರೂ ಒಂದಾಗಿ, ಒಗ್ಗಟಾಗಿ ಸೇರಿದಾಗ ಹಿಂದು ಸಮಾಜ ಭದ್ರಗೊಳ್ಳುತ್ತದೆ. ಕೇರಳ ಸಮಾಜದೊಂದಿಗೆ ಕೊಡಗಿನ ನಂಟು ಆಧ್ಯಾತ್ಮಿಕವಾಗಿ ಹಿಂದಿನಿAದಲೂ ಬೆಸೆದುಕೊಂಡಿದೆ. ಕೇರಳ ಸಮಾಜದವರು ಶ್ರಮಜೀವಗಳು ಮತ್ತು ಬುದ್ದಿವಂತರಾಗಿದ್ದು, ಅಂತಾರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಎಲ್ಲರೂ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಕೇಂದ್ರ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್ ಮಾತನಾಡಿ ನಮ್ಮ ಸಂಸ್ಕೃತಿ ಆಚಾರ-ವಿಚಾರಗಳನ್ನು ಪರಿಪಾಲನೆ ಮಾಡಿದಲ್ಲಿ ನಮ್ಮ ಮಕ್ಕಳಿಗೆ ಅದರ ಬಗ್ಗೆ ಅರಿವು ಮೂಡುತ್ತದೆ. ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದಾಗ, ಮಕ್ಕಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದು ಹೇಳಿದರು.
ಹಿಂದು ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್, ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್ ಹಾಗೂ ಮಡಿಕೇರಿ ಕೆ.ಎನ್.ಎಸ್.ಎಸ್. ಅಧ್ಯಕ್ಷ ಕೆ.ಕೆ. ಹರೀಶ್ ಕುಮಾರ್ ಮಾತನಾಡಿದರು.
ಹಿಂದು ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಮಡಿಕೇರಿ ಎಸ್.ಎನ್.ಡಿ.ಪಿ ಅಧ್ಯಕ್ಷ ಟಿ.ಆರ್. ವಾಸುದೇವ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಮಡಿಕೇರಿ ತಾಲೂಕು ಎಸ್‌ಎನ್‌ಡಿಪಿಯ ಅಧ್ಯಕ್ಷ ವಾಸುದೇವನ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ. ಹಂಸ ಹೊದವಾಡ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್, ಮೂರ್ನಾಡು ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಟಿ.ಕೆ. ಸಂತೋಷ್ ಕುಮಾರ್ ಹಾಗೂ ಹಿಂದೂ ಮಲಯಾಳಿ ಸಂಘದ ಪದಾಧಿಕಾರಿಗಳು ಇದ್ದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ರಂಗೋಲಿ(ಪೂಕಳA) ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು. ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್ ಮತ್ತು ಪಾರಾಣೆಯ ಮಾಜಿ ಸೈನಿಕ ಸಂಜು ಅವರನ್ನು ಶಾಲು ಹೊದಿಸಿ, ಫಲ-ತಾಂಬೂಲ ನೀಡಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭಕ್ಕೂ ಮುಂಚೆ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಪುರುಷರು ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು.